September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಅಂಡಿಂಜೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28 ರಂದು ಆಚರಿಸಲಾಯಿತು.

ಸಭಾಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿಯ ಅಧ್ಯಕ್ಷ ರಮೇಶ್ ಬಂಗೇರ ವಹಿಸಿಕೊಂಡು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದಕ್ಕೆ ಅಭಿನಂದನೆ ತಿಳಿಸಿದರು.

ಕಾರ್‍ಯಕ್ರಮದ ಉದ್ಘಾಟನೆಯನ್ನು ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಹೆಚ್ .ಎಸ್ ಮಾತನಾಡುತ್ತ ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದುದೆಂದರೆ ಸಮಯ. ಬೀಜ ಮತ್ತು ಗೊಬ್ಬರ ಅಂದರೆ ಸರಿಯಾದ ಸಮಯದಲ್ಲಿ ವಿದ್ಯಾರ್ಥಿ ಮನಸ್ಸಿನಲ್ಲಿ ಬೀಜವನ್ನು ಬಿತ್ತಿ ಉತ್ತಮ ರೀತಿಯಲ್ಲಿ ಪ್ರೋತ್ಸಾಹವೆಂಬ ಗೊಬ್ಬರವನ್ನು ಹಾಕಿದಾಗ ಇಂದಿನ ಪುಟಾಣಿ ವಿಜ್ಞಾನಿಗಳೇ ಭವ್ಯ ಭಾರತದ ವಿಜ್ಞಾನಿಗಳಾಗುವವರು ಎಂದರು.

ನಿರ್ಣಾಯಕರಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಜಗದೀಶ್ ಹೆಚ್, ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಶಶಿಧರ್ ಕೆ ಸಹಕರಿಸಿದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಂದರ್ ಸಾಲ್ಯಾನ್, ಶಾಲಾ ಮುಖ್ಯೋಪಾಧ್ಯಾಯರಾದ ಶಿವಶಂಕರ್ ಭಟ್ ಕೆ., ವೇಣೂರು ಪ್ರೌಢ ಶಾಲೆಯ ಶ್ರೀಮತಿ ಪ್ರೇಮಾ ಕೆ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಯ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಅಚಲಾ ಕುಮಾರಿ ವಿಜ್ಞಾನ ದಿನದ ಪ್ರತಿಜ್ಞೆಯನ್ನು ವಾಚಿಸಿದರು. ಮುಖ್ಯೋಪಾಧ್ಯಾಯರಾದ ಶಿವಶಂಕರ್ ಭಟ್ ಭಟ್ ಕೆ. ಸ್ವಾಗತಿಸಿ , ವಿಜ್ಞಾನ ಶಿಕ್ಷಕಿ ಶ್ರೀಮತಿ ಅಕ್ಷತಾ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಕು. ತೇಜಸ್ವಿನಿ ಬಹುಮಾನಗಳ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಕವನ್ ಕುಮಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!