ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳಾದ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪಂಚಾಯತ್ ನ ಸಿಬ್ಬಂದಿಗಳಾದ ಶ್ರೀಮತಿ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ ಹೇಮಾವತಿ, ಸಂಧ್ಯಾ, ಸ್ವಾತಿ ಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.