ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಫೆ.28 ರಂದು ಜರುಗಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಸದಸ್ಯರುಗಳಾದ ಯೋಗೀಶ್ ಕುಮಾರ್, ಶ್ರೀಧರ್ ಕುಲಾಲ್, ಸಮೀರ್, ಗುರುವಾಯನಕೆರೆ ಸಿ ಆರ್ ಪಿ ರಾಜೇಶ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ಶಿವಾನಿ ಮತ್ತಿತರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.
ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ ಆಗಮಿಸಿ ಶುಭ ಹಾರೈಸಿದರು.
ಗುರುವಾಯನಕೆರೆ ಕ್ಲಸ್ಟರ್ ಸಿ ಆರ್ ಪಿ ರಾಜೇಶ್ ಸ್ವಾಗತಿಸಿ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಧನ್ಯವಾದ ಸಲ್ಲಿಸಿ, ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಅಧ್ಯಾಪಕ ವೃಂದ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಹಕಾರ ನೀಡಿದರು.