ಅಂಡಿಂಜೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28 ರಂದು ಆಚರಿಸಲಾಯಿತು.
ಸಭಾಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿಯ ಅಧ್ಯಕ್ಷ ರಮೇಶ್ ಬಂಗೇರ ವಹಿಸಿಕೊಂಡು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದಕ್ಕೆ ಅಭಿನಂದನೆ ತಿಳಿಸಿದರು.
ಕಾರ್‍ಯಕ್ರಮದ ಉದ್ಘಾಟನೆಯನ್ನು ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಹೆಚ್ .ಎಸ್ ಮಾತನಾಡುತ್ತ ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದುದೆಂದರೆ ಸಮಯ. ಬೀಜ ಮತ್ತು ಗೊಬ್ಬರ ಅಂದರೆ ಸರಿಯಾದ ಸಮಯದಲ್ಲಿ ವಿದ್ಯಾರ್ಥಿ ಮನಸ್ಸಿನಲ್ಲಿ ಬೀಜವನ್ನು ಬಿತ್ತಿ ಉತ್ತಮ ರೀತಿಯಲ್ಲಿ ಪ್ರೋತ್ಸಾಹವೆಂಬ ಗೊಬ್ಬರವನ್ನು ಹಾಕಿದಾಗ ಇಂದಿನ ಪುಟಾಣಿ ವಿಜ್ಞಾನಿಗಳೇ ಭವ್ಯ ಭಾರತದ ವಿಜ್ಞಾನಿಗಳಾಗುವವರು ಎಂದರು.
ನಿರ್ಣಾಯಕರಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಜಗದೀಶ್ ಹೆಚ್, ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಶಶಿಧರ್ ಕೆ ಸಹಕರಿಸಿದರು.
ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಂದರ್ ಸಾಲ್ಯಾನ್, ಶಾಲಾ ಮುಖ್ಯೋಪಾಧ್ಯಾಯರಾದ ಶಿವಶಂಕರ್ ಭಟ್ ಕೆ., ವೇಣೂರು ಪ್ರೌಢ ಶಾಲೆಯ ಶ್ರೀಮತಿ ಪ್ರೇಮಾ ಕೆ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಯ ಸದಸ್ಯರು ಉಪಸ್ಥಿತರಿದ್ದರು.
ಶ್ರೀಮತಿ ಅಚಲಾ ಕುಮಾರಿ ವಿಜ್ಞಾನ ದಿನದ ಪ್ರತಿಜ್ಞೆಯನ್ನು ವಾಚಿಸಿದರು. ಮುಖ್ಯೋಪಾಧ್ಯಾಯರಾದ ಶಿವಶಂಕರ್ ಭಟ್ ಭಟ್ ಕೆ. ಸ್ವಾಗತಿಸಿ , ವಿಜ್ಞಾನ ಶಿಕ್ಷಕಿ ಶ್ರೀಮತಿ ಅಕ್ಷತಾ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಕು. ತೇಜಸ್ವಿನಿ ಬಹುಮಾನಗಳ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಕವನ್ ಕುಮಾರ್ ಧನ್ಯವಾದವಿತ್ತರು.