25.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!