ತೆಕ್ಕಾರು: ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ 2,50,000.00 ದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಇವರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ತುಕಾರಾಂ ನಾಯಕ್ ರವರಿಗೆ ಮಾ.2ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾ ಪ್ರತಿನಿಧಿ ಶಿವರಾಮ ಮತ್ತು ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಟ್ರಸ್ಟಿಗಳು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಬ್ರಹ್ಮ ಕಲಶೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.