25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ


ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಆಯೋಜಿಸಿದ ಕಬ್ ಬುಲ್ ಬುಲ್ ತೃತೀಯ ಚರಣ /ಗರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಕಬ್ ವಿದ್ಯಾರ್ಥಿಗಳಾದ ವಿಹಾನ್ ಅಹನ್ ಜೈನ್ , ಚಿರಾಗ್ ,ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ , ಯಕ್ಷಿತಾ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ .

ಈ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರತಿಮ್ ಕುಮಾರ್, ಗೈಡ್ ಆಯುಕ್ತರಾದ ವಿಮಲಾ ರಂಗಯ್ಯ , ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ, ಸಹ ಕಾರ್ಯದರ್ಶಿಗಳಾದ ಜಯವಂತಿ ಸೋನ್ಸ್ ,ಡಿಟಿಸಿ ಶಾಂತರಾಮ ಪ್ರಭು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂಆರ್ ರವರ ಮಾರ್ಗದರ್ಶನದಲ್ಲಿ ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಪ್ರಮೀಳ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!