26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು.

ಯೋಜನೆಯ ಮಾನವ ಸಂಪನ್ಮೂಲ ಮತ್ತು ಸಿಬ್ಬಂದಿ ನಿರ್ವಹಣಾ ವಿಭಾಗದ ನಿರ್ದೇಶಕ ಸುರೇಶ್ ಮೊಯಿಲಿ ಇವರು ಮಾತನಾಡಿ ಮಹಿಳೆಯರು ದಿನದಲ್ಲಿ 18 ಗಂಟೆ ಮನೆಯಲ್ಲಿ ದುಡಿದರೂ ಕೂಡ ಯಾವುದೇ ಗೌರವ ಸನ್ಮಾನಗಳು ದೊರೆಯುವುದಿಲ್ಲ. ಅದೇ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಗೌರವ ಹಾಗೂ ಸ್ವಾವಲಂಬಿ ಬದುಕನ್ನು ಕಾಣಬಹುದು. ಇಂತಹ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು. ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 21 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿ ತುಳಸಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!