26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

ಬೆಳಾಲು : ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ಹಿರಿಯ ನಾಗರಿಕರಿಗಾಗಿ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮವು ಮಾ.1 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್, ನವದೆಹಲಿ ಹಾಗೂ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಅವರು ಮಾತನಾಡಿ, “ಇಂದಿನ ದಿನಗಳಲ್ಲಿ ಹಿರಿಯ ನಾಗರಿಕರು ಹಲವಾರು ಶೋಷಣೆಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಹಾಯವಾಣಿಯ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗುವುದು” ಎಂದರು.

ಸಂಪನ್ಮೂಲ ವ್ಯಕ್ತಿ, ರೇಡಿಯೋ ನಿನಾದ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ವಿ.ಕೆ. ಕಡಬ ಅವರು, ಹಿರಿಯ ನಾಗರಿಕರ ಸಹಾಯವಾಣಿ, ಪಿಂಚಣಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು. ಅಲ್ಲದೆ ಹಿರಿಯ ನಾಗರಿಕರ ಜೊತೆ ಸಂವಾದ ನಡೆಸಿದರು.

ಮುಖ್ಯ ಅತಿಥಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯ್ಕ್ ಕೆ. ಅವರು ಮಾತನಾಡಿ, ಸರ್ಕಾರಿ ಸವಲತ್ತುಗಳನ್ನು ಗ್ರಾ.ಪಂ. ಮೂಲಕ ಪಡೆಯುವಂತೆ ಸಲಹೆ ನೀಡಿದರು.

ಎಸ್.ಡಿ.ಎಂ. ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಪಲ್ಲವಿ ಸ್ವಾಗತಿಸಿ, ಸುಶಾಂತ್ ವಂದಿಸಿ, ಶ್ರೇಯಾ ನಿರೂಪಿಸಿದರು. ಪವನ್ ಮತ್ತು ಪ್ರಕೃತ್ ಎಸ್. ಕಾರ್ಯಕ್ರಮ ಸಂಯೋಜಿಸಿದರು.

Related posts

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!