April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ ಫೈರ್ ಸೇಫ್ಟಿ ಹಾಗೂ ಹೆಲ್ತ್ ಸೇಫ್ಟಿ ಯ ತರಬೇತುದಾರರಾದ ಸತ್ಯರಾಜ್, ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸೆಕೆಂಡರಿ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್, ಶಿಕ್ಷಕ ಮೋನಪ್ಪ ಹಾಗೂ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಉಪಸ್ಥಿತರಿದ್ದರು.

ಶಿಕ್ಷಕ ಗಣೇಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್‌ರಾಜ್ ನಿರೂಪಿಸಿದರು.

Related posts

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya
error: Content is protected !!