ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿಯ ವಾರ್ಷಿಕ ಮಹಾಸಭೆಯು ಗೌಸಿಯಾ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.
ಮಹಾಸಭೆಯು ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಮಡೈನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯನ್ನು ಝೋನ್ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫಿ ಉದ್ಘಾಟಿಸಿದರು. ವೀಕ್ಷಕರಾಗಿ ಝೋನ್ ಅಧ್ಯಕ್ಷರಾದ ಎಸ್ ಎಂ ಕೋಯ ತಂಙಳ್ ಉಜಿರೆ ಆಗಮಿಸಿದ್ದರು. ಸರ್ಕಲ್ ಉಸ್ತುವಾರಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಗುರುವಾಯನಕೆರೆ ವಿಷಯ ಮಂಡಿಸಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನೂತನ ಸಮಿತಿ ರಚನೆಯ ಆಯ್ಕೆ ಪ್ರಕ್ರಿಯೆಗಳಿಗೆ ನೇತೃತ್ವ ನೀಡಿದರು.

ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳನ್ನು ಮಂಡಿಸಿದರು.
ಮುಂದಿನ ಸಂಘಟನಾ ಅವಧಿಯ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕ್ಕರ್ ಸಮಡೈನ್ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಮೆಹಬೂಬ್ ಸಂಜಯನಗರ ಹಾಗೂ ಕೋಶಾಧಿಕಾರಿಯಾಗಿ ಸಂಘಟಕ ಪಿ ಯು ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ನಾವೂರು, ಉಪಾಧ್ಯಕ್ಷರಾಗಿ ಆದಂ ಸಾಹೇಬ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಎನ್ ಎಸ್ ಅಬ್ದುಲ್ ರಹ್ಮಾನ್ ಸಂಜಯನಗರ, ದಅವಾ ಕಾರ್ಯದರ್ಶಿಯಾಗಿ ಪಿ ಯು ಆಲಿಕುಂಞ ಸಖಾಫಿ ನಾವೂರು ,ಇಸಾಬಾ ಕಾರ್ಯದರ್ಶಿಯಾಗಿ ಬಿ ಎಂ ರಮ್ಲಾನ್ ಮೈಕೆ, ಸಾಂತ್ವನ ಕಾರ್ಯದರ್ಶಿಯಾಗಿ ಹಮೀದ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಎಂ ಎಚ್ ಅಬ್ದುಲ್ಲಾ ಮಲೆಬೆಟ್ಟು, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕೇಳ್ತಾಜೆ ಇವರನ್ನು ಆಯ್ಕೆ ಮಾಡಲಾಯಿತು. ಒಂಭತ್ತು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಯ್ಕೆ ಮಾಡಲಾಯಿತು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಸಂಜಯನಗರ ಧನ್ಯವಾದಕವಿತ್ತರು.