ಗುರುವಾಯನಕೆರೆ : ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘ ಗುರುವಾಯನಕೆರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಡಾ. ಪಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚೂರಿ ಗ್ರೂಪ್ ಬೆಂಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಮಾ.3ರಂದು ಗುರುವಾಯನಕೆರೆ ವಿಕಸ ಸದನ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಮಂಗಳೂರು ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ವೈದ್ಯರಾದ ಡಾ| ವಿಷ್ಣು ರವರು ಉದ್ಘಾಟಿಸಿದರು. ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯದ ಪಿಆರ್ ಒ ಸಯ್ಯದ್ , ಪ್ರಸಾದ್ ನೇತ್ರಾಲಯ ಟೆಕ್ನಿಷಿಯನ್ ಗಳು , ನಿರ್ದೇಶಕರಾದ ಶೇಖರ್ ನಾಯ್ಕ್, ರಾಘವ ಶೆಟ್ಟಿ, ಮಮತಾ ಎಮ್ ಶೆಟ್ಟಿ, ದಿನೇಶ್ ನಾಯ್ಕ್, ಮೋಹನ್ ಹೆಗ್ಡೆ, ಪ್ರವೀಣ್ ಚಂದ್ರ ಮೆಹಂದಲೆ , ಪ್ರೇಮಾವತಿ ಭಟ್, ಹಾಗೂ ಸಂಘದ ಸಿಬ್ಬಂದಿಗಳು , ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅನಿತಾ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಉಪಾಧ್ಯಕ್ಷ ಯೋಗೀಶ್ ಪೈ ಧನ್ಯವಾದವಿತ್ತರು.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಯಿತು. ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ , ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಆಯ್ಕೆಯಾದವರಿಗೆ ಮಂಗಳೂರು ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಲಾಯಿತು.