March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಮಾ.5ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಸದಸ್ಯರಾದ ಅಹಮ್ಮದ್ ಕಬೀರ್, ಚಂದ್ರಶೇಖರ್ ಗೌಡ, ಶ್ರೀಮತಿ ಚೇತನಾ, ಶ್ರೀಮತಿ ಮೋಹಿನಿ, ಶ್ರೀಮತಿ ಶಾಂಭವಿ, ರಾಮಣ್ಣ, ಶ್ರೀಮತಿ ಲತಾ, ಶಾಹುಲ್ ಹಮೀದ್,
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿದರು. ಪಂ. ಗುಮಾಸ್ತ ಮಧುಕರ್ ಪ್ರಭು ಅನುಪಾಲನ ವರದಿ ವಾಚಿಸಿದರು.

Related posts

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!