ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.4 ರಂದು ಗ್ರಾ.ಪಂ. ಅಧ್ಯಕ್ಷೆ ವಿಮಲ ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಗದೀಪ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಸದಸ್ಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಪ್ರಮಿಳಾ ಅನುಪಾಲನಾ ವರದಿ ಮಂಡಿಸಿದರು. ಪಿಡಿಓ ದಿನೇಶ್ ಸ್ವಾಗತಿಸಿ, ಡಾ.ದೇವಿ ಪ್ರಸಾದ್ ಬೊಲ್ಮ ಕಳೆದ ಗ್ರಾಮ ಸಭೆಯ ನಡಾವಳಿ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು.