April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ ಬಗ್ಗೆ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ʼಸ್ಪರ್ಶʼ ಹೆಣ್ಣು ಮಕ್ಕಳ ಜಾಗೃತಿ ಅನ್ನುವ ಕಾರ್ಯಕ್ರಮ ಜರುಗಿತು.

ಆಳ್ವಾಸ್‌ ವೆಲ್‌ ನೆಸ್‌ ಸೆಂಟರ್‌ನ ನಿರ್ದೇಶಕರಾದ ಡಾ.ದೀಪಾ ಕೊಠಾರಿ ಅವರು ಮಕ್ಕಳಿಗೆ ಒಳ್ಳೆಯ ಸ್ಪರ್ಶ, ಅಪಾಯದ ಸ್ಪರ್ಶದ ಕುರಿತಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಪುಷ್ಪಾ ಎನ್‌, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಚಂದ್ರಾವತಿ ಗೌಡ, ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿ , ಬಂಟರ ಮಹಿಳಾ ವಿಭಾಗದ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ಕಾರ್ಯದರ್ಶಿ ಶ್ರೇಯಾ ಶೆಟ್ಟಿ, ಕೋಶಾಧಿಕಾರಿ ರಕ್ಷಿತಾ ಶೆಟ್ಟಿ, ನಿರ್ದೇಶಕರುಗಳಾದ ಸಂಸ್ಕೃತಿ ಶೆಟ್ಟಿ, ವಿಂದ್ಯಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಪಸ್ಥಿತರಿದ್ದರು.

ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮಿ ನವೀನ್‌ ಸಾಮಾನಿ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ನಿರ್ದೇಶಕಿ ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!