ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ ಬಗ್ಗೆ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ʼಸ್ಪರ್ಶʼ ಹೆಣ್ಣು ಮಕ್ಕಳ ಜಾಗೃತಿ ಅನ್ನುವ ಕಾರ್ಯಕ್ರಮ ಜರುಗಿತು.

ಆಳ್ವಾಸ್ ವೆಲ್ ನೆಸ್ ಸೆಂಟರ್‌ನ ನಿರ್ದೇಶಕರಾದ ಡಾ.ದೀಪಾ ಕೊಠಾರಿ ಅವರು ಮಕ್ಕಳಿಗೆ ಒಳ್ಳೆಯ ಸ್ಪರ್ಶ, ಅಪಾಯದ ಸ್ಪರ್ಶದ ಕುರಿತಾಗಿ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕಿ ಪುಷ್ಪಾ ಎನ್, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಚಂದ್ರಾವತಿ ಗೌಡ, ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿ , ಬಂಟರ ಮಹಿಳಾ ವಿಭಾಗದ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ಕಾರ್ಯದರ್ಶಿ ಶ್ರೇಯಾ ಶೆಟ್ಟಿ, ಕೋಶಾಧಿಕಾರಿ ರಕ್ಷಿತಾ ಶೆಟ್ಟಿ, ನಿರ್ದೇಶಕರುಗಳಾದ ಸಂಸ್ಕೃತಿ ಶೆಟ್ಟಿ, ವಿಂದ್ಯಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಪಸ್ಥಿತರಿದ್ದರು.
ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮಿ ನವೀನ್ ಸಾಮಾನಿ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ನಿರ್ದೇಶಕಿ ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.