April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

ಮುಂಡಾಜೆ:ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನವನ್ನು ಗಳಿಸಿ ಅಧಿಕಾರವನ್ನು ಪಡೆದುಕೊಂಡಿದೆ.ಪಕ್ಷೇತರ ಒಂದು ಸ್ಥಾನವನ್ನು ಗಳಿಸಿಕೊಂಡಿದ್ದು,ಕಾಂಗ್ರೇಸ್ ಒಂದು ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ.

ಆಡಳಿತ ಮಂಡಳಿಯ ನೂತನ‌ ಆಡಳಿತ ಮಂಡಳಿಗೆ ಸೊಸೈಟಿಯ ಕಳೆದ ಅವಧಿಯ ಉಪಾಧ್ಯಕ್ಷ ,ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವ ಕಾರ್ಯದರ್ಶಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಜಿಲ್ಲಾ ಸಂಘಟಕ,ಯುವ ನಾಯಕ ಪ್ರಕಾಶ್ ನಾರಾಯಣ್ ರಾವ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಹಾಗೂ ಉಪಾಧ್ಯಕ್ಷರಾಗಿ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ,ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾಗಿ ಕಜೆ ವೆಂಕಟೇಶ್ವರ ಭಟ್,ಅಜಯ್ ನೆರಿಯ, ಶಶಿಧರ್ ಕಲ್ಮಂಜ, ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು, ರವಿ ಪೂಜಾರಿ ಚಾರ್ಮಾಡಿ,ಶಿವಪ್ರಸಾದ್ ಗೌಡ ತೋಟತ್ತಾಡಿ,ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ, ಶ್ರೀಮತಿ ಮೋಹಿನಿ ಓಬಯ್ಯ ಗೌಡ ತೋಟತ್ತಾಡಿ,ಸುಮನ ಗೋಖಲೆ ಮುಂಡಾಜೆ ಆಯ್ಕೆಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಗಳಿಸಿ ಅಧಿಕಾರದ ಗದ್ದುಗೆಗೆ ಏರಿದ್ದಾರೆ.ಪಕ್ಷೇತರ 1 ಸ್ಥಾನ ಅಲಂಕರಿಸಿದ್ದಾರೆ.ಜ.19ರಂದು ಚುನಾವಣೆ ನಡೆದಿದ್ದು,5ರ ಪೈಕಿ2 ಮಹಾಸಭೆಗಳಲ್ಲಿ ಭಾಗವಹಿಸದ ಕೆಲವು ಮಂದಿ ನ್ಯಾಯಾಲಯದ ಮೆಟ್ಟಿಲು ಹತ್ತಿ ಮತದಾನ ಮಾಡಿದ ಕಾರಣ ಅದರ ತೀರ್ಪು ಇತ್ತೀಚೆಗಷ್ಟೆ ಬಂದಿದ್ದು ಬಳಿಕ ಅಧಿಕೃತ ಫಲಿತಾಂಶ ಘೋಷಣೆಯಾಗಿತ್ತು.ಸಿಡಿಓ ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ,ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಕೋಟ್ಯಾನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು. ನೂತನವಾಗಿ ರಚನೆಯಾದ ಆಡಳಿತ ಮಂಡಳಿಯನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಚುನಾವಣಾ ಸಂಚಾಲಕ ಕೊರಗಪ್ಪ ಗೌಡ,ಸಹ ಸಂಚಾಲಕಿ ಪೂರ್ಣಿಮಾ, ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ, ಪ್ರಮುಖರಾದ ನಾರಾಯಣ ಫಡ್ಕೆ,ವೆಂಕಟರಾಯ ಆಡೂರು,ಅನಂತ ಭಟ್ ಮಚ್ಚಿಮಲೆ, ಓಬಯ್ಯ ಗೌಡ ತೋಟತ್ತಾಡಿ,ಪ್ರಾನ್ಸಿಸ್ ವಿ.ಡಿ ತೋಟತ್ತಾಡಿ, ತೀಕ್ಷೀತ್ ದಿಡುಪೆ ಅಭಿನಂದಿಸಿದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!