April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ.

ಇದೀಗ ಆಗಾಗ ವಿದ್ಯುತ್ ಕಡಿತವಾಗುವುದರಿಂದ ಈಗ ಬಾಕಿ ಇರುವ ವಿದ್ಯುತ್ ಫೀಡರನ್ನು ಸಹ ಐದು ಮೆಗಾ ವೋಲ್ಟ್ ನಿಂದ 12.5 MVA ಮೆಗಾ ವೋಲ್ಟ್ ಪರಿವರ್ತಿಸಿ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಬೇಕೆಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸರ್ಕಾರವು ಪೂರಕವಾಗಿ ಸ್ಪಂದಿಸಿ ಇಂದು ಇಲಾಖೆಯು ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ ಮಾಡಿ ಅಳವಡಿಸಲಾಯಿತು.

ಈ ಮೂಲಕ ಈ ಭಾಗದ ಬಹು ಕಾಲದ ರೈತರ ಸಾರ್ವಜನಿಕರ ಬೇಡಿಕೆ ಈಡೇದಂತಾಯಿತು ಎಂದು ಸಾರ್ವಜನಿಕರು ಸರ್ಕಾರಕ್ಕೆ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya
error: Content is protected !!