20.8 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮವು ಮಾ. 5ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಕೆ. ಎಚ್. ಅವರು ಸಂಪನ್ಮೂಲ ವ್ಯಕ್ತಿಯಾಗಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ವಹಿಸಿದರು.

ಕಾರ್ಯಕ್ರಮ ಸಂಯೋಜಕರಾದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ವಿನಯ ಶ್ಯಾಮ್ ಕಾರ್ಯಕ್ರಮದ ರೂಪುರೇಷೆಯಲ್ಲಿ ಸಹಕರಿಸಿದರು.

Related posts

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
error: Content is protected !!