April 29, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ – ಕೊಲ್ಲಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಬೆಳ್ತಂಗಡಿ ಕಡೆಗೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಅಶೋಕ್ ಲೈಲಾಂಡ್ ಕಂಪನಿಯ KA-19-AE-6067 ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ(FMS) ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿದ್ದು ತಕ್ಷಣ ಕಾರ್ಯಾಚರಣೆಗಿಳಿದ ತಂಡ ಮಾ.6 ರಂದು ರಾತ್ರಿ ಸುಮಾರು 8:45 ಕ್ಕೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ರಸ್ತೆಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡಿರುವುದು ಪತ್ತೆಯಾಗಿದೆ.ಲಾರಿ ಮತ್ತು ಮರಗಳನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ದಾಸ್ತಾನು ಕಚೇರಿಗೆ ತಂದು ಮಾ.7 ರಂದು ಮಹಜರು ನಡೆಸಿದಾಗ ಲಾರಿಯಲ್ಲಿ ವಿವಿಧ ಜಾತಿಯ 11.270 ಘನ ಮೀಟರ್ ಮರ ಪತ್ತೆಯಾಗಿದ್ದು.

ಲಾರಿ ಮತ್ತು ಮರದ ಮೌಲ್ಯ ಸುಮಾರು 15 ಲಕ್ಷವಾಗಿದೆ. ಲಾರಿ ಚಾಲಕ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ನಿವಾಸಿ ಮೊಹಮ್ಮದ್ ಅವರ ಮಗ ಸಿದ್ದಿಕ್ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಸಿದ್ದಿಕ್ ಗೆ ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ವಿಭಾಗೀಯ ಅರಣ್ಯ ಅಧಿಕಾರಿ(DFO) ಶ್ರೀಕಾಂತ್ ಕಣದಾಲ್ಲಿ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಮತ್ತು ವಿನಯ ಕುಮಾರ್, ವಾಹನ ಚಾಲಕ ಜಯಪ್ರಕಾಶ್ ಹಾಗೂ ಬೆಳ್ತಂಗಡಿ ವಲಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ನಾಯ್ಕ್, ಗಸ್ತು ವನಪಾಲಕ ಪರಶುರಾಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!