ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿ ಆಫ್ ಮೈನ್ಜ್ ನ ಸ್ಪೋರ್ಟ್ಸ್ ಮತ್ತು ಮೈಂಡ್ ಬಾಡಿ ಮೆಡಿಸಿನ್ ವಿಭಾಗ ದ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ ನಡೆಯಿತು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರದ ಧರ್ಮ ಧಿಕಾರಿಗ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಡೀನ್ ಡಾ. ಬಿಂದು ಶ್ರೀಧರ್ ಹಾಗೂ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.