
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಸತೀಶ್ ಕಾಮತ್ , ನಡ ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ, ತೀಕ್ಷೀತ್ ದಿಡುಪೆ, ಮೇನೇಜರ್ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.