ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ ನೀಡಿ, 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ನುಡಿಗಳ ಮೂಲಕ ಶುಭ ಹಾರೈಸಿ, ಅವರ ಗುರಿಯತ್ತಲಿನ ‘ಗಮನ’ಕ್ಕೆ ಸ್ಪೂರ್ತಿ ತುಂಬಿ, ಶಿಕ್ಷಕ ವರ್ಗಕ್ಕೆ ಮಾರ್ಗದರ್ಶನ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಅಂಕ ಗಳಿಕೆಯಲ್ಲಿ ಸ್ವಲ್ಪ ಹಿಂದಿರುವ ವಿದ್ಯಾರ್ಥಿಗಳ ಮಾಹಿತಿ ನೀಡಿ, ಆ ಮಕ್ಕಳ ಸುಧಾರಣೆಗೆ ಕೈಗೊಂಡ ಕ್ರಮಗಳು ಮತ್ತು ಬೆಳವಣಿಗೆಗಳ ಮಾಹಿತಿ ನೀಡಿದರು.