31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!