ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ 3 ತಿಂಗಳ ಕಾಲ ಮಿತ್ತಬಾಗಿಲು ನಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು, ಇದರ ಸಮಾರೋಪ ಕಾರ್ಯಕ್ರಮವನ್ನು ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ ರವರು ವಹಿಸಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಷನ್ ಕ್ಲಾಸ್ ಹಮ್ಮಿ ಕೊಂಡಿದ್ದು ಪರೀಕ್ಷಾ ಸಮಯದಲ್ಲಿ ಎಸ್. ಎಸ್. ಎಲ್. ಸಿ ಮಕ್ಕಳಿಗೆ ಅನುಕೂಲ ವಾಗಿದ್ದು ಎಲ್ಲ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕೆಂದರು. ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಈ ಒಂದು ಅವಕಾಶ ಕಲ್ಪಿಸಿದಕ್ಕಾಗಿ ಸಂತೋಷ ವ್ಯಕ್ತ ಪಡಿಸಿದರು. ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ತಾಲೂಕಿನ ಯೋಜನಾಧಿಕಾರಿಯಾವರಾದ ಸುರೇಂದ್ರ ರವರು ಪೂಜ್ಯರು
ಯೋಜನೆಯ ಮೂಲಕ ಹತ್ತು ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿದ್ಯೆಯ ಜೊತೆಗೆ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಕೂಡ ಬೆಳೆಸಿಕೊಳ್ಳಬೇಕು ಎಂದರು.
ವಿಶೇಷ ತರಗತಿ ನೀಡಿದ ಶಿಕ್ಷಕರಾದ ಶ್ವೇತ , ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಒಕ್ಕೂಟ ಕಾರ್ಯದರ್ಶಿಯಾದ ರಮೇಶ್ ಉಪಸ್ಥಿತರಿದ್ದರು. ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ವರಲಕ್ಷ್ಮಿ ಸ್ವಾಗತಿಸಿ ಶಾಲಾ ಶಿಕ್ಷಕರಾದ ಮಂಜುಳಾರವರು ಧನ್ಯವಾದವಿತ್ತರು.