20.8 C
ಪುತ್ತೂರು, ಬೆಳ್ತಂಗಡಿ
March 11, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

ಉಜಿರೆ: ಇಲ್ಲಿಯ ಭಾರತ್ ಆಟೋ ಕಾರ್ ಸಂಸ್ಥೆಯ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.07ರಂದು ರಾತ್ರಿ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್ ಮಾಲಕ ಜಯಂತ್(56 ವ) ಭಾರತ್ ಶೋರೂಮ್ ಬಳಿ ಅಜಿತ್ ನಗರ ರಸ್ತೆಗೆ ತಿರುಗಿಸುವ ವೇಳೆ ಅನುಗ್ರಹದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸ್ಕೂಟ‌ರ್ ಸವಾರನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾ.08) ಮೃತ ಪಟ್ಟಿದ್ದಾರೆ.

ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!