September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಅಭಿನಂದನೀಯವಾದುದು. ಆದರೆ ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದ್ದು ವಿಷಾದನೀಯ.

ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿಗಳ ಪ್ರದೇಶಗಳು ಇನ್ನೂ ವಿದ್ಯುತ್ , ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಆದಿವಾಸಿಗಳ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ಮೀಸಲಿಟ್ಟಿರುವುದು ಅಭಿನಂದನೀಯ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕನಿಷ್ಠ 100 ಕೋಟಿ ಹೆಚ್ಚುವರಿಯಾಗಿ ಬಿಡುಗಡೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯ ನಮ್ಮದು. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ನಾಯಕರು ಮಾತ್ರ ನಕ್ಸಲ್ ಶರಣಾಗತಿಗಾಗಿ 10 ಕೋಟಿ ಮೀಸಲಿಟ್ಟಿದೆ ಎಂದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.


ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನೂತನ ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಶ್ಲಾಘನೀಯ. ಇದು ಆದಷ್ಟು ಬೇಗ ಅನುಷ್ಠಾನಗೊಳಿಸಲು ಮುಂದಾಗಬೇಕು. ಇದರಿಂದ ಜಿಲ್ಲೆಯ ದಲಿತ , ಆದಿವಾಸಿ ಸೇರಿದಂತೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಬಜೆಟ್ ಘೋಷಣೆ ಕೇವಲ ಕಾಗದದ ಹುಲಿಯಾಗಬಾರದು. ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಬೇಕು. ಇಲ್ಲದಿದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಅಧ್ಯಕ್ಷ ವಸಂತ ನಡ, ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ, ಸಂಚಾಲಕ ಶೇಖರ ಲಾಯಿಲ ತಿಳಿಸಿದ್ದಾರೆ.

Related posts

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!