ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.
ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.