32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಬಳಿಯ ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ರೂ.83 ಲಕ್ಷದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ , ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಕೊಕ್ಕಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಮಾಜಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪುರುಷೋತ್ತಮ, ಲತಾ, ಪ್ರಮೀಳಾ, ವಿಶ್ವನಾಥ, ಜಾನಕಿ, ಜಗದೀಶ್, ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಠ್ಠಲ ಭಂಡಾರಿ, ಶ್ರೀನಾಥ್ ಬಡಕೈಲು, ರವಿಚಂದ್ರ ಪುಡ್ಕೆತ್ತೂರು, ಕೊಕ್ಕಡ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಎಂಡೋ ಸಲ್ಫಾನ್ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ್ ಕೆಂಗುಡೇಲು, ಹತ್ಯಡ್ಕ ಪ್ರಾ. ಆರೋಗ್ಯ ಕೇoದ್ರದ ವೈದ್ಯಾಧಿಕಾರಿ ಡಾ. ಪ್ರಕಾಶ್, ಡಾ| ಮೋಹನ್ ದಾಸ್ ಗೌಡ ಕೊಕ್ಕಡ, ಎಂಡೋಸಲ್ಫಾನ್ ಪೋಷಕರ ಸಮಿತಿ ಅಧ್ಯಕ್ಷೆ ರೇವತಿ ತಮ್ಹನಕರ್, ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಉಮೇಶ್ ಅಲಂಗೂರು, ಗುತ್ತಿಗೆದಾರ ಕಾರ್ತಿಕ್ ಕೊಕ್ಕಡ ಉಪಸ್ಥಿತರಿದ್ದರು.

ಕೊಕ್ಕಡ ಗ್ರಾ.ಪಂ. ನಿಕಟಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
error: Content is protected !!