April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಮಡಂತ್ಯಾರು ವಲಯದ ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 3 ತಿಂಗಳ ಟ್ಯೂಷನ್ ಕ್ಲಾಸ್ ಹಮ್ಮಿ ಕೊಂಡಿದ್ದು ಸಮಾರೋಪ ಕಾರ್ಯಕ್ರಮ ವನ್ನು ನಡೆಸಲಾಯಿತು.

ಮಡಂತ್ಯಾರು ವಲಯದ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ ಮಾತಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಬಹಳಷ್ಟು ಕಾರ್ಯಕ್ರಮಗಳು ನಡೆಯುತ್ತಿದ್ದು ಇದೀಗ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಟ್ಯೂಷನ್ ಕ್ಲಾಸನ್ನು ಮಾಡುತ್ತಿದ್ದಾರೆ ನಿಮಗೆ ಸಿಕ್ಕಿದಂತ ಅವಕಾಶವನ್ನು ಬಳಕೆ ಮಾಡಿಕೊಂಡು ಸದ್ರಿ ಶಾಲೆ ಶೇ, 100ಫಲಿತಾಂಶ ವನ್ನು ಪಡೆದು ಉತ್ತೀರ್ಣರಾಗಿ ಎಂದು ಶುಭ ಹಾರೈಸಿದರು.

ಮುಖ್ಯ ಶಿಕ್ಷಕರಾದ ಪ್ರಕಾಶ್ ನಾಯಕ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ಅನುಷ್ಠಾನ ಮಾಡಿರುವುದು ಸಂತೋಷಕರವಾಗಿದೆ ಹಾಗೂ ಮಕ್ಕಳ ವಿದ್ಯಾಭ್ಯಾಸ ದಲ್ಲಿ ಬದಲಾವಣೆ ತಂದಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಯೋಜನೆಯ ಯಾವುದೇ ಕಾರ್ಯಕ್ರಮಗಳು ಶಾಲೆಯಲ್ಲಿ ಅನುಷ್ಠಾನ ಮಾಡುವಲ್ಲಿ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದರು.

ಮಡಂತ್ಯಾರು ವಲಯ ಮೇಲ್ವಿಚಾರಕರು ಜನಾರ್ದನ್ ಯೋಜನೆಯ ಕಾರ್ಯಕ್ರಮಗಳು ಹಾಗೂ ಬೆಳೆದು ಬಂದ ಹಾದಿ ಹಾಗೂ ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ಮಾತಾಡಿದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಶಿವಾನಿ ಶೇಟ್ ವಂದಿಸಿದರು. ಸೇವಾಪ್ರತಿನಿಧಿ ಪರಮೇಶ್ವರ್ ನಿರೂಪಿಸಿದರು.
ವಿಶೇಷ ತರಗತಿಯ ವಿದ್ಯಾರ್ಥಿ ಭವ್ಯ, ಚೈತ್ರ, ಯಕ್ಷಿತ ಅನಿಸಿಕೆ ಹೇಳಿದರು ಹಾಗೂ ಶಾಲಾ ಶಿಕ್ಷಕರು, ವಲಯಾಧ್ಯಕ್ಷರು ಜಯ ಪೂಜಾರಿ ಹಾಗೂ ವಿಶೇಷ ತರಗತಿಯ 52 ಮಕ್ಕಳು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya
error: Content is protected !!