March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!