ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಈ ಸಂಸ್ಥೆಯ ತಾಯಂದಿರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಭಾರತಿ ಇವರು ಕ್ರೀಡಾ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಶಾಲೆಯ ಪಥ ಸಂಚಲನಕ್ಕೆ ಹಾಗೂ ಇನ್ನಿತರ ಕಲಿಕಾ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾಗಿದ್ದ ಡ್ರಮ್ ಸೆಟ್ ನ್ನು ಕೊಡುಗೆಯಾಗಿ ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಾಯತ್ರಿ , ಪಂಚಾಯತ್ ಸದಸ್ಯ ನವೀನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಯಶವಂತ ಗೌಡ, ಸಂಸ್ಥೆಯ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹಾಗೂ ಎಲ್ಲಾ ಶಿಕ್ಷಕ ವರ್ಗದವರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.
ಶಿಕ್ಷಕಿ ಆರತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಹಿರಿಯ ಸಹ ಶಿಕ್ಷಕ ಅರವಿಂದ ಗೋಖಲೆ ಸ್ವಾಗತಿಸಿದರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುಮಾರ್ ವಂದಿಸಿದರು