25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

ಉಜಿರೆ: ಇಲ್ಲಿಯ ಭಾರತ್ ಆಟೋ ಕಾರ್ ಸಂಸ್ಥೆಯ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.07ರಂದು ರಾತ್ರಿ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್ ಮಾಲಕ ಜಯಂತ್(56 ವ) ಭಾರತ್ ಶೋರೂಮ್ ಬಳಿ ಅಜಿತ್ ನಗರ ರಸ್ತೆಗೆ ತಿರುಗಿಸುವ ವೇಳೆ ಅನುಗ್ರಹದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸ್ಕೂಟ‌ರ್ ಸವಾರನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾ.08) ಮೃತ ಪಟ್ಟಿದ್ದಾರೆ.

ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!