March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ . ಎ ಇವರು ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಾಮುಖ್ಯತೆಯ ಬಗೆಗೆ ಮಾತನಾಡಿ ಪೌರಾಣಿಕ ಸ್ತ್ರೀ ಪಾತ್ರಗಳ ತೌಲಾನಿಕದೊಂದಿಗೆ ಆಧುನಿಕ ಸಮಾಜದಲ್ಲಿ ಹೆಣ್ಣಾದವಳು ಹೇಗೆ ನಡೆಯಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.


ದ್ವಿತೀಯ ಬಿ.ಕಾಮ್ ವಿದ್ಯಾರ್ಥಿನಿ ಸಫ ತಸ್ಮಿಯಾ ಸ್ವಾಗತಿಸಿ, ಫಾತಿಮಾ ವಂದಿಸಿದರು. ಕು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ ಜಿ. ನಾಯಕ್,ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
error: Content is protected !!