ಮಂಗಳೂರು : ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು.
ಕೆಲ ದಿನಗಳ ಹಿಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಾಗೂ ಊರಿನ ಜನತೆ ದಿಗಂತ್ ಹುಡುಕಾಟದಲ್ಲಿ ತೊಡಗಿದ್ದರು. ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.