25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ ನಡೆಸಲಾಯಿತು.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.

Related posts

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya
error: Content is protected !!