25.1 C
ಪುತ್ತೂರು, ಬೆಳ್ತಂಗಡಿ
April 30, 2025
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾಕ್ಕೆ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಉಪಾಧ್ಯಕ್ಷೆ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಸದಸ್ಯರಾದ ಸವಿತಾ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!