ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ, ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಅಂಗನವಾಡಿ ಸಹಾಯಕಿಯಾಗಿ 30 ವರ್ಷ ಸೇವೆಸಲ್ಲಿಸಿ ನಿವೃತ್ತರಾಗಿರುವ ಲಲಿತಾ ಪೂಜಾರಿಯವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಎಸ್. ಶೆಟ್ಟಿ, ಆರಂಬೋಡಿ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ, ಪ್ರಮುಖರಾದ ವಿನೋದ ಪೂಜಾರಿ, ಯಶೋಧ ಶೆಟ್ಟಿ, ಸುನೀತಾ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.