March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾರ್ಚ್ 10 ರಂದು 2024-25 ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಡಾ. ರಜತಾ, ಗ್ರಂಥಪಾಲಕರು, ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ ಉಜಿರೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜದ ಹೃದಯದಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರವು ಬಹು ಮುಖ್ಯವಾಗಿದೆ. ಪರಿಪೂರ್ಣ ಶಿಕ್ಷಕನಾದರೆ ಮಾತ್ರ ಪರಿಪೂರ್ಣ ನಾಗರೀಕರನ್ನು ಸೃಷ್ಟಿಸಲು ಸಾಧ್ಯ. ಶಿಕ್ಷಕ ವೃತ್ತಿಯು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗಿರದೇ ಬದಲಾಗಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಮಾತನಾಡಿ ಶಿಕ್ಷಕನಾಗಿರುವವನು ಶಿಸ್ತು, ತಾಳ್ಮೆ, ಕ್ರಿಯಾಶೀಲತೆ, ಸಮಯಪ್ರಜ್ಞೆ, ಕರ್ತವ್ಯನಿಷ್ಠೆ ಹಾಗೂ ಕುಶಲತೆ ಹೊಂದಿರಬೇಕು. ವಿದ್ಯಾರ್ಥಿಗಳನ್ನು ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿ ಅವರಲ್ಲಿರುವ ಸಾಮರ್ಥ್ಯವನ್ನು ಹೊರ ತರಲು ಅವಕಾಶ ಮಾಡಿಕೊಡುವವರೇ ನಿಜವಾದ ಶಿಕ್ಷಕರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನರವರು ಮಾತನಾಡಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸಂಸ್ಕೃತಿ ಮತ್ತು ಶಿಕ್ಷಕ ತರಬೇತಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಗುಣಮಟ್ಟದ ಶಿಕ್ಷಣ ದೊರಕುವುದಲ್ಲದೇ ಸರ್ವತೋಮುಖ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಶಿಕ್ಷಕ ತರಬೇತಿಯ ಅವಶ್ಯಕತೆ ಇದೆ ಎಂದರು. ವೇದಿಕೆಯಲ್ಲಿ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳನ್ನು ಭಾರತದ ನಕಾಶೆಯ ಸುತ್ತಲು ದೀಪ ಬೆಳಗಿಸುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪೋಷಕರು ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಉಪನ್ಯಾಸಕರಾದ ತಿರುಮಲೇಶ ರಾವ್ ಎನ್ ಕೆ ಸ್ವಾಗತಿಸಿ, ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ಅಖಿಲಾ ಎಂ ಪಿ ವಂದಿಸಿ, ರಶ್ಮಿ ಕೆ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya
error: Content is protected !!