41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಅರಸಿನಮಕ್ಕಿ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಮತ್ತು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 31ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಅರಸಿನಮಕ್ಕಿಯ ಹತ್ಯಡ್ಕ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ಮಾ. 9 ರಂದು ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ದೀಪ ಜ್ಯೋತಿ ಹೇಗೆ ಬೆಳಗುತ್ತ ಹಾಗೆ ನೀವು ಟೈಲರಿಂಗ್ ವಿದ್ಯೆಯನ್ನು ಕಲಿತು ಒಳ್ಳೆಯ ರೀತಿಯಲ್ಲಿ ಸಮಾಜದಲ್ಲಿ ಬೆಳಗಬೇಕು ಎಂದು ಶುಭಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಶಾಂತ ಪಿ ಶೆಟ್ಟಿ, ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀತಾ ರಾಜೇಶ್ ಆಚಾರ್ಯ, ಅರಸಿನಮಕ್ಕಿ ಹಿರಿಯ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಶಕುಂತಳಾ ಎಂ ಆಚಾರ್ ಮತ್ತು ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 31 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶ್ರೀಮತಿ ಧನ್ಯ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್ ಮೋನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಭಾರತಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!