
ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿಗಳ ಪರವಾಗಿ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಎಸ್.ಡಿ.ಎಸ್ ಹಾಲ್ ಮಡಂತ್ಯಾರಿನಲ್ಲಿ ಮಾ 8 ರಂದು ನಡೆಯಿತು.
ಶಾಸಕ ಹರೀಶ್ ಪೂಂಜ ಕಾರ್ಯಕರ್ತರಿಗೆ ಹಾಗೂ ನೂತನ ಆಡಳಿತ ಮಂಡಳಿಗೆ ಅಭಿನಂದನೆ ತಿಳಿಸಿ, ಪ್ರತಿಯೊಬ್ಬ ಕಾರ್ಯಕರ್ತ ಹಾಗೂ ಕೃಷಿಕರಿಗೆ ಸೊಸೈಟಿಯಿಂದ ಉತ್ತಮ ಸ್ಪಂದನೆ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸ್ ಅಧ್ಯಕ್ಷತೆ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಎಂ ಬಂಗೇರ,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪಾ ನವೀನ್ ಕೊಡ್ಲಕ್ಕೆ, ಚುನಾವಣಾ ಪ್ರಭಾರಿ ಪದ್ಮನಾಭ ಅರ್ಕಜೆ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ ಹಟ್ಟತ್ತೋಡಿ,ನಿರ್ದೇಶಕರುಗಳಾದ ಶ್ರೀಮತಿ ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೋ,ಮಹಾಬಲ ಕೆ, ಸುರೇಶ್, ಗೋಪಾಲಕೃಷ್ಣ ಕೆ,ಗಣೇಶ್, ಚುನಾವಣೆಯಲ್ಲಿ ಸ್ಪರ್ದಿಸಿದ್ದ ಪುಷ್ಪರಾಜ್ ಜೈನ್, ಪುರುಷೋತ್ತಮ ಶೆಟ್ಟಿ, ಶಕ್ತಿಕೇಂದ್ರದ ಪ್ರಮುಖರಾದ ರಾಜೇಶ್, ಶೈಲೇಶ್ ಪುಳಿಮಜಲು, ದಿನೇಶ್ ಕರ್ಕೇರ ಸೋಣಂದೂರು ಉಪಸ್ಥಿತರಿದ್ದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಲಾಯಿತು. ಕಿಶೋರ್ ಎಚ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.