April 28, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

ಉಜಿರೆ : ರಾಷ್ಟ್ರೀಯ ಮಾನ್ಯತಾ ಮಂಡಳಿಯ ನಿಯಮದಂತೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆಗಳ ಮನ್ಯತಾ ಮಂಡಳಿಯಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತಿದೆ.


ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಎನ್.ಎ.ಬಿ.ಹೆಚ್ ಪ್ರಮಾಣಪತ್ರವನ್ನು ಮಾ.10 ರಂದು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದು ಆಸ್ಪತ್ರೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ, ಹೆಗ್ಗಡೆ ಪರಿವಾರದ ಎಲ್ಲರ ಸಹಕಾರದಲ್ಲಿ ಆಸ್ಪತ್ರೆಯು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡುತ್ತಿದೆ. ಗ್ರಾಮೀಣ ಜನತೆ ನಗರದ ಹೈಟೆಕ್ ವೈದ್ಯಕೀಯ ಸೇವೆಯಿಂದ ವಂಚಿತರಾಗದAತೆ ವಿವಿಧ ಸೌಲಭ್ಯಗಳನ್ನು ಇಲ್ಲಿ ನೀಡಲಾಗುತ್ತಿದೆ. ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳು, ಯಶಸ್ವಿ ಶಸ್ತ್ರ ಚಿಕಿತ್ಸೆಗಳು, ವಿಶೇಷ ಕಾಳಜಿಯ ಆರೈಕೆ, ಮಿತದರದ ಚಿಕಿತ್ಸೆ, ಶುಚಿತ್ವದೊಂದಿಗೆ ಸ್ನೇಹಮಯ ವಾತಾವರಣ, ಉಚಿತ ಡಯಾಲಿಸಿಸ್ ಸೇವೆ, ಉಚಿತ ವೈದ್ಯಕೀಯ ಶಿಬಿರಗಳು, -ಎಲ್ಲವೂ ಜನರ ವಿಶ್ವಾಸಗಳಿಸಿದೆ.


ಭಾರತದ ಪ್ರಸೂತಿ ಮತ್ತು ಸ್ತಿçÃರೋಗ ಶಾಸ್ತçದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾ‍ಸ್ತ್ರ ದ ಸೊಸೈಟಿಗಳ ಒಕ್ಕೂಟ ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಮಾನ್ಯತಾ ಪ್ರಮಾಣಪತ್ರ ಕೂಡ ಈಗಾಗಲೇ ದೊರೆತಿದೆ.
ಈ ಆಸ್ಪತ್ರೆಯು ರಾಷ್ಟ್ರೀಯ ಮಾನ್ಯತಾ ಮಂಡಳಿಯ ಮಾನದಂಡದಂತೆ ವೈದ್ಯಕೀಯ ಸೇವೆ ನೀಡುತ್ತಿರುವುದರಿಂದ 2ನೇ ಬಾರಿಗೆ ಎನ್.ಎ.ಬಿ.ಹೆಚ್ ಪ್ರಮಾಣಪತ್ರ ದೊರೆತ್ತಿದ್ದು, ಡಿ. ಹರ್ಷೇಂದ್ರ ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಡಾ| ಮೀರಾ ಅನುಪಮಾ, ಡಾ| ಪ್ರೌಸ್ಟಿಲ್ ಹಾಗೂ ಎನ್.ಎ.ಬಿ.ಹೆಚ್ ನಿಯಮ ಪಾಲನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!