41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

ಮುಂಡಾಜೆ:ಕಳೆದ ವಾರವಷ್ಟೇ ನಿಡಿಗಲ್ ಹಳೇ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ‌.2000 ದಂಡ ವಿಧಿಸಿದ ಘಟನೆ ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದಿದ್ದು ಅಂಥದ್ದೇ ಘಟನೆ ಮತ್ತೆ ಮರುಕಳಿಸಿದೆ.

ಮಾ.11 ರಂದು ಬೆಳಗ್ಗಿನ ಹೊತ್ತು ನಿಡಿಗಲ್ ಹೊಸ ಸೇತುವೆಯ ಬಳಿ ತ್ಯಾಜ್ಯ ಕಂಡುಬಂದಿದ್ದು ಯಾರೋ ನದಿಯನ್ನು ಗುರಿಯಾಗಿಸಿ ಎಸೆದ ತ್ಯಾಜ್ಯವು ಸೇತುವೆಯ ಮೇಲೆ ಬಿದ್ದಿರುತ್ತದೆ. ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕಸದ ಚೀಲವನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಕೆಲವು ದಾಖಲೆಗಳು ಸಿಕ್ಕಿದ್ದು ಅದು ಉಜಿರೆಯ ವ್ಯಕ್ತಿಗಳದ್ದೆಂದು ತಿಳಿದು ಬಂದಿದೆ.

ಕೂಡಲೇ ಅವರನ್ನು ದೂರವಾಣಿ ಮೂಲಕ ಸ್ಥಳಕ್ಕೆ ಕರೆಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿ ರೂ. 1000 ದಂಡ ವಿಧಿಸಿ ಎಚ್ಚರಿಕೆ ನೀಡಿದ ಮುಂಡಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya
error: Content is protected !!