September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಮಾ.12 ರಂದು ಅಂಬೇಡ್ಕರ್ ಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಪ್ರಭಾಕರ ಗೌಡ, ಗ್ರಾ.ಪಂ. ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಾಗತಿಸಿ ವರದಿ ವಾಚಿಸಿದರು. ಕಾರ್ಯದರ್ಶಿ ಶ್ರೀಮತಿ ಭಾರತಿ ಜಮಾ ಖರ್ಚು ಬಗ್ಗೆ ತಿಳಿಸಿದರು.

Related posts

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
error: Content is protected !!