April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya
error: Content is protected !!