May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರೆಸ್ ಕ್ಲಬ್ ಸಹಕರಾದೊಂದಿಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮಾ.13 ರಂದು ಉಜಿರೆ ಕಾಲೇಜಿನ ಸಮ್ಯಕ್‌ದರ್ಶನ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.


ತುಮಕೂರು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಸಂಜಯ್ ಎಸ್.ಗೌಡ ವಿಚಾರ ಸಂಕಿರಣವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, ಇಂದು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ಸುದ್ದಿಗಳು ಬರುತ್ತಿದೆ. ಜರ್ನಲಿಸಂ ವಿದ್ಯಾರ್ಥಿಗಳು ಇದನ್ನು ಇನ್ನೊಬ್ಬರಿಗೆ ಕಳುಹಿಸುವ ಮೊದಲು ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಬೇಕು. ಇಂದು ಇಂತಹ ಜಾಲತಾಣಗಳಲ್ಲಿ ಪಾಸಿಟಿವ್‌ಗಿಂತ ನೆಗೆಟ್ಯೂವ್ ಸುದ್ದಿಗಳೇ ಜಾಸ್ತಿ ಬರುತ್ತಿದೆ. ಹಣ ಗಳಿಸುವುದೇ ಇದರ ಹಿಂದಿರುವ ಉದ್ದೇಶವಾಗಿದೆ. ಸಾಮಾಜಿಕ ಜಾಲತಾಣಗಳ ದುರುಪಯೋಗಗಳು ಹೆಚ್ಚುತ್ತಿದ್ದು, ಸಾಂಪ್ರಾದಾಯಕ ಪತ್ರಿಕೋಧ್ಯಮ ನಶಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಎಸ್. ಅವರು ಮಾತನಾಡಿ, ದೀಪ ಉರಿಯಲು ಗಾಳಿ ಹೇಗೆ ಮುಖ್ಯವೋ ಅದರಂತೆ ದೇಶದಲ್ಲಿ ಪ್ರಜಾಪ್ರಭುತ್ವದ ಉಸಿರಾಟಕ್ಕೆ ಮಾಧ್ಯಮ ಆಸ್ತಿತ್ವ ಮುಖ್ಯವಾಗಿದೆ. ದೇಶದ ಜನರಲ್ಲಿ ಜಾಗೃತಿಯನ್ನು ಮೂಡಿಸಿ ಮಾಹಿತಿಯನ್ನು ನೀಡುವ ಮಹತ್ತರವಾದ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ ಎಂದು ತಿಳಿಸಿದರು.


ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಮಾತನಾಡಿ, ಯುವ ಪತ್ರಕರ್ತರು ಅವಕಾಶಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು, ವಿದ್ಯಾರ್ಥಿಗಳು ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನದ ಉಪಯೋಗಳನ್ನು ಪಡೆದುಕೊಂಡು ತಮ್ಮ ಕ್ಷೇತ್ರಗಳಲ್ಲಿ ಉನ್ನತಿಯನ್ನು ಸಾಧಿಸಬೇಕು ಎಂದು ಕರೆ ನೀಡಿದರು.


ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯ ಪ್ರೊ| ವಿಶ್ವನಾಥ ಪಿ.ಅಧ್ಯಕ್ಷತೆ ವಹಿಸಿ, ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯುತ್ತಾರೆ. ದೇಶದಲ್ಲಿ ಹಾಗೂ ಸಮಾಜದಲ್ಲಿ ಸಾಮಾರಸ್ಯ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಹಿರಿದಾದುದು, ಜನರನ್ನು ಎಚ್ಚರಗೊಳಿಸುವ, ಮಾಹಿತಿ ಒದಗಿಸುವ ಕಾರ್ಯ ಮಾಧ್ಯಮಗಳ ಮೂಲಕ ನಡೆಯುತ್ತಿದೆ ಎಂದು ತಿಳಿಸಿದರು.
ಎಸ್.ಡಿ.ಎಂ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥರು ಹಾಗೂ ಸಂಘಟನಾ ಸಮಿತಿಯ ಪ್ರಧಾನ ಸಂಚಾಲಕರಾದ ಡಾ. ಭಾಸ್ಕರ್ ಹೆಗಡೆ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಜುಶ್ರೀ ಪ್ರಿಂಟರ್‍ಸ್‌ನ ಮ್ಯಾನೇಜರ್ ಶೇಖರ್ ಹಾಗೂ ಶ್ರೀನಿವಾಸ ಇವರನ್ನು ಗೌರವಿಸಲಾಯಿತು. ನೈದಿಲೆ ಮತ್ತು ಸಿಂಚನಾ ಕಾರ್ಯಕ್ರಮ ನಿರೂಪಿಸಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಶ್ರೀಮತಿ ಸಹನಾ ಎಂ. ಧನ್ಯವಾದವಿತ್ತರು. ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ, ಸುನೀಲ್ ಹೆಗ್ಡೆ, ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕ ಡಾ. ಹಂಪೇಶ್ ಕೆ.ಎಸ್, ಡಿಜಿಟಲ್ ಮೀಡಿಯ ಮುಖ್ಯಸ್ಥ ಮಾಧವ ಹೊಳ್ಳ, ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್, ಎಸ್.ಡಿ.ಎಂ ಕಂಪ್ಯೂಟರ್ ಸೈನ್ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ್, ಡಾ. ಸತೀಶ್ ಕುಮಾರ್ ಅಂಡಿಂಜೆ ಮೊದಲಾದವರು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!