ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.೮ ರಂದು ಆಚರಿಸಲಾಯಿತು. ಈ ವರ್ಷದ “Grow & Glow: Accelerating Action for Women’s Wellness” ಎಂಬ ಥೀಮ್ ಆಧಾರಿತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಪ್ರಿಯಾ ಬಲ್ಲಾಳ್, ಪ್ರೊಫೆಸರ್, ಕಸ್ತೂರ್ಬಾ ಮೆಡಿಕಲ್ ಕಾಲೇಜು ಹಾಗೂ ವಿಜಯ ಕ್ಲಿನಿಕ್ ಮ್ಯಾಟರ್ನಿಟಿ ಮತ್ತು ಸರ್ಜಿಕಲ್ ನರ್ಸಿಂಗ್ ಹೋಮ್ ನಿರ್ದೇಶಕಿ, ಪಾಲ್ಗೊಂಡು ಮಹಿಳೆಯರ ಆರೋಗ್ಯ, ವಯಸ್ಸು ಸಂಬಂಧಿತ ಸಮಸ್ಯೆಗಳು ಹಾಗೂ ಆರೈಕೆ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಈ ಸಮಾರಂಭದಲ್ಲಿ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್, ಉಪಸ್ಥಿತರಿದ್ದು ಶುಭಹಾರೈಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ರಜತಾ ಶೆಟ್ಟಿ ಮಹಿಳಾ ದಿನಾಚರಣೆಯ ಆಚರಣೆಯ ಮಹತ್ವ ತಿಳಿಸಿದರು. ಕುಮಾರಿ ರಾಶಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಸ್ಥಳೀಯ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮಹಿಳಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ನಡೆಸಿದ್ದು, ಈ ಸಂದರ್ಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.