March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!