ಬೆಳ್ತಂಗಡಿ: ಕೊಯ್ಯೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವೀತಿಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಇವರ ಅಧ್ಯಕ್ಷತೆಯಲ್ಲಿ ಮಾ.13 ರಂದು ಶ್ರೀ ಪಂಚದುರ್ಗಾ ಸಹಕಾರಿ ಸಭಾಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಅಕ್ರಮ- ಸಕ್ರಮ, 94/ಸಿ ವಿಚಾರದ ಬಗ್ಗೆ ಚರ್ಚೆಗಳು ನಡೆದವು, ಕಾಡು ಪ್ರಾಣಿಗಳ ಉಪಟಳದಿಂದ ಬೆಳೆ ನಾಶ,ಫಸಲು ಹಾನಿಯಾಗಿದೆ.ಇದರ ತಡೆಗೆ ಕ್ರಮ ವಹಿಸಲು ಗ್ರಾಮಸ್ಥರು ಒತ್ತಾಯಿಸಿದರು.
ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಹರೀಶ್,ಸದಸ್ಯರಾದ ಯಶವಂತ, ಲೋಕೇಶ, ಇಸುಬು, ಜಗನ್ನಾಥ, ಶಾರದಾ, ವಿಶಾಲಾಕ್ಷಿ, ಸುಮಿತಾ, ದಿವ್ಯಾ, ಗೀರೀಶ್, ಚಂದ್ರವತಿ, ಹೇಮಾವತಿ, ಕಾರ್ಯದರ್ಶಿ ಪರಮೇಶ್ವರ್ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಸಹಕರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿ, ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು.