April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
error: Content is protected !!